ಮುಂಬೈ: 13 ವರ್ಷದ ಬಾಲಕಿಯ ಮೇಲೆ ಆಕೆಯ ಸಹಪಾಠಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮುಂಬೈನ ಮಾತುಂಗಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಪ್ರಕರಣ ಸಂಬಂಧ ಇಬ್ಬರು ಅಪ್ರಾಪ್ತ ವಯಸ್ಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಡೋಂಗ್ರಿ ಸುಧಾರಣಾ ಗೃಹಕ್ಕೆ (ಬಾಲಾಪರಾಧಿಗಳ ಗೃಹ) ಕಳುಹಿಸಿದ್ದಾರೆ.
ಸಂತ್ರಸ್ತೆ 8ನೇ ತರಗತಿಯಲ್ಲಿ ಕಲಿಯುತ್ತಿದ್ದು, ಇತರ ವಿದ್ಯಾರ್ಥಿಗಳು ನೃತ್ಯ ಅಭ್ಯಾಸಕ್ಕಾಗಿ ಹೊರಬಂದಾಗ ಆಕೆಯ ಇಬ್ಬರು ಸಹಪಾಠಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇಬ್ಬರು ಆರೋಪಿಗಳು ಪರಿಸ್ಥಿತಿಯ ಲಾಭ ಪಡೆದು ಈ ಕೃತ್ಯ ಎಸಗಿದ್ದಾರೆ ಎಂದು ಮಾತುಂಗಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 376 (ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.