Home ಟಾಪ್ ಸುದ್ದಿಗಳು ಬಸ್ ನಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಕಂಡಕ್ಟರ್, ಡ್ರೈವರ್ ಬಂಧನ

ಬಸ್ ನಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಕಂಡಕ್ಟರ್, ಡ್ರೈವರ್ ಬಂಧನ

ಪಾಲಾ: ಬಸ್ಸಿನೊಳಗಡೆ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೇರಳದ ಪಾಲಾದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ಡ್ರೈವರ್ ನನ್ನು  ಪೊಲೀಸರು ಬಂಧಿಸಿದ್ದಾರೆ..

ಬಂಧಿತ ಆರೋಪಿಗಳನ್ನು ಅಪ್ಝಲ್ ಹಾಗೂ ಅಬಿನ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಕೇರಳದ ಇಡುಕ್ಕಿಯವರಾಗಿದ್ದಾರೆ.

ಈಗಾಗಲೇ ಮದುವೆ ಮಾಡಿಕೊಂಡಿರುವ ಅಪ್ಝಲ್ ವಿದ್ಯಾರ್ಥಿನಿ ಜೊತೆ ಪ್ರೀತಿಯ ನಾಟಕವಾಡಿದ್ದಾನೆ. ಶನಿವಾರದಂದು ಶಾಲೆ ಬಿಟ್ಟು ಮನೆಗೆ ತೆರಳಲು ಬಾಲಕಿ ಬಸ್ ಸ್ಯಾಂಡ್ ಗೆ ಬಂದಿದ್ದಾಳೆ. ಈ ವೇಳೆ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಈತನ ಕೃತ್ಯಕ್ಕೆ ಕಂಡಕ್ಟರ್ ಅಬಿನ್ ಸಾಥ್ ನೀಡಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Join Whatsapp
Exit mobile version