ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿಗೆ ಕ್ಲೀನ್‌ ಚಿಟ್‌

Prasthutha|

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ‌ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರಿಗೆ ಕೇಂದ್ರೀಯ ತನಿಖಾ ದಳ(ಸಿಬಿಐ) ಕ್ಲೀನ್‌ ಚಿಟ್‌ ನೀಡಿದೆ.ಸೋಲಾರ್ ಹಗರಣದ ಪ್ರಮುಖ ಆರೋಪಿ ಮಹಿಳೆ ಮಾಡಿದ ಲೈಂಗಿಕ ಶೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ಕ್ಲೀನ್ ಚಿಟ್ ನೀಡುವ ವರದಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಇಲ್ಲಿನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದೆ.

- Advertisement -

ತಿರುವನಂತಪುರಂನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಿಬಿಐ ಮಂಗಳವಾರ ತನಿಖಾ ವರದಿ ಸಲ್ಲಿಸಿದೆ. ವರದಿಯಲ್ಲಿ, “ಉಮ್ಮನ್‌ ಚಾಂಡಿ ವಿರುದ್ಧದ ಆರೋಪಕ್ಕೆ ಪೂರಕವಾದ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಇದೊಂದು ಕಪೋಲಕಲ್ಪಿತ ಪ್ರಕರಣ ಎಂದು ಉಲ್ಲೇಖಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಸೋಲಾರ್‌ ಹಗರಣ ಪ್ರಕರಣದ ಆರೋಪಿಯಾದ ಸರಿತಾ ನಾಯರ್‌, ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಸೇರಿ ಇತರರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು

Join Whatsapp