ವಡೋದರಾ: ಸೆಲ್ಫಿ ತೆಗೆಯುವುದರಿಂದ ನಿರಂತರವಾಗಿ ಅಪಘಾತಗಳಿಗೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ನ ಡ್ಯಾಂಗ್ ಜಿಲ್ಲಾಡಳಿತ ಸೆಲ್ಫಿ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಜೂನ್ 23 ರಂದು ಹೊರಡಿಸಿದ ಸಾರ್ವಜನಿಕ ಅಧಿಸೂಚನೆ ಪ್ರಕಾರ ಅಪಘಾತಗಳನ್ನು ತಡೆಗಟ್ಟಲು ಪ್ರವಾಸಿ ತಾಣಗಳಲ್ಲಿ ಸೆಲ್ಫಿ ಕ್ಲಿಕ್ ಮಾಡುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಆದರೆ ಈ ಕಾನೂನು ಕೇವಲ ಪ್ರವಾಸಿ ತಾಣಗಳಿಗೆ ಸೀಮಿತವಾಗಿಲ್ಲ ಬದಲಾಗಿ ಜಿಲ್ಲೆಯಾದ್ಯಂತ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಟಿ.ಕೆ.ದಾಮರ್ ಹೇಳಿದ್ದಾರೆ.
ನಿರ್ಬಂಧಿತ ಪ್ರದೇಶಗಳಲ್ಲಿ ಸೆಲ್ಫಿ ತೆಗೆಯುವ ಮೂಲಕ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಸೂಚನೆಯು ಎಚ್ಚರಿಸಿದೆ.