ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೇಘಸ್ಫೋಟ ಸಂಭವಿಸಿದ್ದು, ನೀರು ನುಗ್ಗಿದ ಪರಿಣಾಮ ಪರಿಣಾಮ ಮನೆ ಕುಸಿದು ಬಿದ್ದಿದೆ, ಅವಶೇಷಗಳಡಿ ಒಂದೇ ಕುಟುಂಬದ ಐವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಪೋಂಟಾ ಸಾಹಿಬ್ ಪ್ರದೇಶದಲ್ಲಿ ಬುಧವಾರ ರಾತ್ರಿ ಮೇಘಸ್ಫೋಟ ಸಂಭವಿಸಿದ್ದು, ಮಾಳಗಿ ದಡಿಯಾತ್ ಗ್ರಾಮದ ಹಲವಾರು ಮನೆಗಳಿಗೆ ನೀರು ನುಗ್ಗಿದೆ ಎಂದು ಅವರು ಹೇಳಿದರು.
ಈ ಪೈಕಿ ಒಂದು ಮನೆ ಕುಸಿದಿದೆ. ಒಂದೇ ಕುಟುಂಬದ ಐವರು ಅದರ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಳಗಿ ದಡಿಯಾತ್ನಲ್ಲಿ ಆಸ್ತಿಪಾಸ್ತಿಗಳಿಗೆ ಭಾರೀ ಹಾನಿಯಾಗಿದ್ದು, ಲೋಕೋಪಯೋಗಿ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಕುಲದೀಪ್ ಸಿಂಗ್ ಅವರ ಮನೆ ಕುಸಿದಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.