ಉತ್ತರ ಪ್ರದೇಶ ಚುನಾವಣೆ: ಸಿಎಂ ಆದಿತ್ಯನಾಥ್ ಅಯೋಧ್ಯೆಯಿಂದಲ್ಲ, ಗೋರಖ್ ಪುರ್ ನಿಂದ ಸ್ಪರ್ಧೆ !

Prasthutha|

ನವದೆಹಲಿ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಶನಿವಾರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಆದಿತ್ಯನಾಥ್ ಅವರು ಗೋರಖ್ ಪುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ದೇವೇಂದ್ರ ಪ್ರಧಾನ್ ತಿಳಿಸಿದ್ದಾರೆ.

- Advertisement -

ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಮುಖ್ಯಮಂತ್ರಿ ಯೋಗಿ ಅವರು ಅಯೋಧ್ಯೆ ಅಥವಾ ಮಥುರಾದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹ ಹರಿದಾಡಿತ್ತು.

ಗೋರಖ್ ಪುರ್ (ನಗರ) ವಿಧಾನಸಭಾ ಕ್ಷೇತ್ರದ ಚುನಾವಣೆ ಮಾರ್ಚ್ 3ರಂದು ನಡೆಯಲಿದೆ. ಉತ್ತರಪ್ರದೇಶದಲ್ಲಿ ಒಟ್ಟು ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಬಹಿರಂಗವಾಗಲಿದೆ.

Join Whatsapp