ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಆಪರೇಷನ್ ಹಸ್ತದ ಚರ್ಚೆ ನಡುವೆ ಸೋಮಶೇಖರ್ ಅವರ ಈ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ.
ಮಾಜಿ ಸಚಿವ ಹಾಗೂ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಮಾರಪಾರ್ಕ್ ಈಸ್ಟ್ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸೋಮಶೇಖರ್ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಷಯದ ಬಗ್ಗೆ ಚರ್ಚೆ ನಡೆಸಿದರು.