Home ಟಾಪ್ ಸುದ್ದಿಗಳು ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್: ಬಿಜೆಪಿಯಲ್ಲಿ ಮತ್ತೆ ಸಂಚಲನ..!

ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್​ ಟಿ ಸೋಮಶೇಖರ್: ಬಿಜೆಪಿಯಲ್ಲಿ ಮತ್ತೆ ಸಂಚಲನ..!

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಆಪರೇಷನ್ ಹಸ್ತದ ಚರ್ಚೆ ನಡುವೆ ಸೋಮಶೇಖರ್ ಅವರ ಈ ನಡೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ.

ಮಾಜಿ ಸಚಿವ ಹಾಗೂ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಮಾರಪಾರ್ಕ್ ಈಸ್ಟ್​​ನಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸೋಮಶೇಖರ್​ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಷಯದ ಬಗ್ಗೆ ಚರ್ಚೆ ನಡೆಸಿದರು.

Join Whatsapp
Exit mobile version