ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು

Prasthutha|

ದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಇಂದು (ಮಾ.16) ಜಾಮೀನು ಮಂಜೂರು ಮಾಡಿದೆ.

- Advertisement -

ಹಲವು ಸಮನ್ಸ್ ಗಳನ್ನು ತಪ್ಪಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಈಡಿ) ನೀಡಿದ ಎರಡು ದೂರುಗಳ ಆಧಾರದ ಮೇಲೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ನ್ಯಾಯಾಲಯವು 15,000 ರೂಪಾಯಿ ಮೌಲ್ಯದ ಶ್ಯೂರಿಟಿ ಬಾಂಡ್ ಮತ್ತು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿದೆ.



Join Whatsapp