ಮಡಿಕೇರಿ: ಎರಡು ವರ್ಷಗಳ ಹಿಂದೆ ಮಹಾಮಳೆಯಿಂದ ತೊಂದರೆಗೆ ಸಿಲುಕಿದ್ದ ಹಾಗೂ ಮನೆ ಕಳೆದುಕೊಂಡಿದ್ದ ಕುಟುಂಬ ಗಳಿಗೆ ವಿತರಿಸಲು ಬಾಕಿ ಇರುವ ಮನೆಗಳನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಿ ಹಸ್ತಾಂತರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಯಿಂದ ಉಂಟಾದ ಅನಾಹುತದ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ಫೋಸಿಸ್ ವತಿಯಿಂದ ನಿರ್ಮಿಸುತ್ತಿರುವ 195 ಮನೆಗಳನ್ನೂ ಸಹ ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಹಸ್ತಾಂತರ ಮಾಡಲಾಗುವುದು ಎಂದರು.
ಗ್ರಾಮೀಣ ಹಾಗೂ ಮುಖ್ಯ ರಸ್ತೆಗಳಿಗೆ ಅಂದಾಜು ಪಟ್ಟಿ ಸಿದ್ಧಪಡಿಸಲು ಸೂಚಿಸಲಾಗಿದೆ. ಮೊದಲ ಹಂತದಲ್ಲಿ ತಕ್ಷಣ ದುರಸ್ತಿ ಮಾಡುವುದು, ಎರಡನೇ ಹಂತದಲ್ಲಿ ಹಾಳಾಗಿರುವ ರಸ್ತೆಗಳನ್ನು ಪುನರ್ ನಿರ್ಮಿಸಲಾಗುವುದು. 2018-19 ರಲ್ಲಿ ನಿರ್ಮಿಸಬೇಕಿದ್ದ ಮನೆಗಳ ಪೈಕಿ 835 ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದರಲ್ಲಿ ಕೆಲಸವು ಮಾನೆಗಳು ಮಾತ್ರ ಬಾಕಿ ಇದ್ದು, ಬಹುತೇಕ ಎಲ್ಲಾ ಮನೆಗಳಲ್ಲಿಯೂ ಜನ ವಾಸಿಸುತ್ತಿದ್ದಾರೆ ಎಂದರು.
ವಿದ್ಯುತ್ ಸಂಪರ್ಕಕ್ಕೆ ಕ್ರಮ
ಹಾನಿಯಾಗಿರುವ ವಿದ್ಯುತ್ ಕಂಬಗಳ ಪಟ್ಟಿ ಮಾಡಿ, ಟ್ರ್ಯಾನ್ಸ್‍ಫಾರ್ಮರ್ ಹಾಗೂ ಕಂಬಗಳನ್ನು ಪುನ: ಸ್ಥಾಪಿಸಲು ವ್ಯವಸ್ಥೆ ಮಾಡಿ ವಿದ್ಯುತ್ ಸಂಪರ್ಕ ನೀಡುವುದು ಇಲ್ಲಿನ ಜೆಸ್ಕಾಂ ಅಧಿಕಾರಿಗಳ ಜವಾಬ್ದಾರಿ. ಎಂ.ಡಿ ಖುದ್ದಾಗಿ ಮೇಲ್ವಿಚಾರಣೆ ಮಾಡುವಂತೆ ಸೂಚಿ¸ಲಾಗಿದೆ ಎಂದರು ಎನ್.ಡಿ.ಆರ್.ಎಫ್ ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಈ ಕೆಲಸದ ಮೇಲ್ವಿಚಾರಣೆ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಸೆಸ್ಮಿಕ್ ಅಧ್ಯಯಕ್ಕೆ ಕ್ರಮ:
ಕೊಡಗು ಜಿಲ್ಲೆಯ ಸೆಸ್ಮಿಕ್ ವಲಯದಲ್ಲಿ ಪದೇ ಪದೇ ಭೂ ಕುಸಿತ ಹಾಗೂ ಭೂ ಕಂಪದ ಸೂಚನೆಗಳು ಬರುತ್ತಿವೆ. ಸೆಸ್ಮಿಕ್ ಅಧ್ಯಯನ ಮಾಡಲು ರಾಷ್ಟ್ರದ ಪ್ರಮುಖ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ಮುಂದಿನ ವಾರ ನ್ಯಾಷನಲ್ ಜಿಯೋಗ್ರಾಫಿಕ್ ಸಂಸ್ಥೆ, ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಮಟೀರಿಯಲ್ ಹಾಗೂ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ, ಬೆಂಗಳೂರು ಹಾಗೂ ಮೈಸೂರು ವಿವಿಗಳ ಜಿಯೋಲಾಜಿಕಲ್ ವಿಭಾಗದವರು ಈ ಬಗ್ಗೆ ಅಧ್ಯಯನ ಕೈಗೊಳ್ಳಲಿದ್ದಾರೆ. ಅದರ ಆಧಾರದ ಮೇಲೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸೆಸ್ಮಿಕ್ ವಲಯ ಮುಂದುವರೆಯುವಲ್ಲಿ ಜನವಸತಿ ಆಗದಂತೆ ಕ್ರಮ ವಹಿಸಲಾಗುವುದು. ಕೆಲವು ಕಡೆ ಮನೆಗಳಿಗೆ ರೆಟ್ರೋ ಫಿಟ್ಟಿಂಗ್ ಮಾಡಿ ರಕ್ಷಣೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದರು.
ಭೂಕುಸಿತವಾಗಿರುವ ಸ್ಥಳಗಳ ಬಗ್ಗೆ ಅಮೃತಾ ವಿಶ್ವವಿದ್ಯಾಲಯದವರು ಅವರು ಅಧ್ಯಯನ ಕೈಗೊಂಡು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಭೂಕುಸಿತವನ್ನು ತಡೆಗಟ್ಟಲು ಹಲವಾರು ತಂತ್ರಜ್ಞಾನವಿದೆ. ರಿವಿಟ್ಟಿಂಗ್, ರೀಟೈನಿಂಗ್ ಗೋಡೆ ಕಟ್ಟುವಂತಹ ತಂತ್ರಜ್ಞಾನವಿದೆ. ಯಾವುದನ್ನು ಬಳಸಬೇಕೆಂದು ಸಲಹೆ ಮಾಡುತ್ತಾರೋ ಅದನ್ನು ಕೂಡಲೇ ಪ್ರಾರಂಭಿಸಿ ಮುಂದಿನ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರುವ ಬಗ್ಗೆ ಕ್ರಮ ಕೈಗೊಳ್ಳಲು ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.