ಪತ್ರಕರ್ತನ ಶಸ್ತ್ರಚಿಕಿತ್ಸೆಗೆ 2 ಲಕ್ಷ ಪರಿಹಾರ ಮಂಜೂರು ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಸಂಘದ ರಾಜ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲೆ ಕೆಮ್ಮುಗಿಲು ಪತ್ರಿಕೆ ಸಂಪಾದಕ ಸೋಮಶೇಖರ ಕೆರಗೋಡು ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.

- Advertisement -

ಸೋಮಶೇಖರ ಕೆರಗೋಡು ಅವರು ಅನಾರೋಗ್ಯ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು 4 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದು ಸಂಕಷ್ಟದಲ್ಲಿರುವ ಬಗ್ಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ನೆರವು ಕೋರಿದ್ದರು.

ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಮಾನವೀಯ ದೃಷ್ಟಿಯಿಂದ ಚಿಕಿತ್ಸೆ ಭಾಗವಾಗಿ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಘ ಕೃತಜ್ಞತೆಗಳನ್ನು ಸಲ್ಲಿಸಿದೆ.

Join Whatsapp