Home ಟಾಪ್ ಸುದ್ದಿಗಳು ಅನುದಾನದ ಬಗ್ಗೆ ಪ್ರಸ್ತಾಪಿಸಿದ ಕಾಗಿನೆಲೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಬೊಮ್ಮಾಯಿ

ಅನುದಾನದ ಬಗ್ಗೆ ಪ್ರಸ್ತಾಪಿಸಿದ ಕಾಗಿನೆಲೆ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡ ಬೊಮ್ಮಾಯಿ

►‘ಬರೀ ಆಶ್ವಾಸನೆ ಕೊಡುವ ಮುಖ್ಯಮಂತ್ರಿ ಆಗಬಾರದು’

ಬೆಂಗಳೂರು: ನಗರದ ವಿಧಾನಸಭಾ ಕ್ಷೇತ್ರದ ಮಂಜುನಾಥಸ್ವಾಮಿ ದೇಗುಲದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಅನುದಾನದ ಬಗ್ಗೆ ಪ್ರಸ್ತಾಪ ಮಾಡಿದ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಅವರ ಕೈಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಕ್ ಕಿತ್ತುಕೊಂಡ ಪ್ರಸಂಗ ನಡೆದಿದೆ.


ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಅನುದಾನ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಈ ವೇಳೆ ಕೋಪಗೊಂಡ ಬೊಮ್ಮಾಯಿ ಸ್ವಾಮೀಜಿ ಕೈಯಿಂದ ಮೈಕ್ ಕಿತ್ತುಕೊಂಡಿದ್ದಾರೆ.

ವೇದಿಕೆಯಲ್ಲಿ ಮಾತನಾಡುತ್ತಿದ್ದ ಈಶ್ವರಾನಂದ ಸ್ವಾಮೀಜಿ ಅವರು, ಸಿಎಂ ಬೊಮ್ಮಾಯಿ ಅವರು ಕೇವಲ ಆಶ್ವಾಸನೆ ಕೊಡುವ ಮುಖ್ಯಮಂತ್ರಿಗಳಾಗಬಾರದು. ಬೆಂಗಳೂರು ಪ್ರವಾಹ ಬಂದು ಏನೆಲ್ಲಾ ಆಗಿದೆ ಎಂಬುದು ತಿಳಿದಿದೆ. ಆದರೆ ಇದು ಅಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಮನವರಿಕೆಯಾಗುತ್ತಿಲ್ಲ ಎಂದು ಹೇಳುತ್ತಿದ್ದರು.

ಇದಕ್ಕೆ ಕೋಪಗೊಂಡ ಬೊಮ್ಮಾಯಿ ಅವರು, ಸ್ವಾಮೀಜಿಗಳು ಮಾತನಾಡುತ್ತಿರುವಾಗಲೇ ಮೈಕ್ ಕಸಿದುಕೊಂಡು, ಒತ್ತುವರಿ ತೆರವು ಮಾಡುವ ಮೂಲಕ ಆದಷ್ಟು ಬೇಗ ರಾಜಕಾಲುವೆ ಕೆಲಸವನ್ನು ಮಾಡುತ್ತೇನೆ. ಆ ಕೆಲಸ ಈಗಾಗಲೇ ಆರಂಭವಾಗಿದೆ. ಸರ್ಕಾರದಿಂದ ಕೂಡ ಅದಕ್ಕೆ ಬೇಕಾದ ಅನುದಾನ ನೀಡಲಾಗಿದೆ ಎಂದು ಹೇಳಿದ್ದಾರೆ.

Join Whatsapp
Exit mobile version