Home ಟಾಪ್ ಸುದ್ದಿಗಳು ಬಿಎಸ್’ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ ಎಂದ ಸಿಎಂ ಬೊಮ್ಮಾಯಿ

ಬಿಎಸ್’ವೈ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ ಎಂದ ಸಿಎಂ ಬೊಮ್ಮಾಯಿ

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ ಪ್ರಕ್ಷುಬ್ಧಗೊಳಿಸುವಂತಹ ಕೆಲಸ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ ಎಂದರು.


ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಈ ಕೃತ್ಯ ಕ್ಷಮೆಗೆ ಅರ್ಹವಲ್ಲ. ಕಾಂಗ್ರೆಸ್ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ಸುರ್ಜೆವಾಲ ಹೇಳಬೇಕು ಎಂದು ಹೇಳಿದರು.

Join Whatsapp
Exit mobile version