ಮಳೆಗೆ ಸಾವನ್ನಪ್ಪಿದ ಇಬ್ಬರು ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಪರಿಹಾರ: ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ಕಳೆದ ರಾತ್ರಿ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪೈಪ್ ನಲ್ಲಿ ಸಿಲುಕಿ ಸಾವನ್ನಪ್ಪಿದ
ಇಬ್ಬರು ಕಾರ್ಮಿಕರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ
ಘೋಷಣೆ ಮಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಳ್ಳಾಲದ ಸಮೀಪ ಪೈಪ್ ನಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಅವರ ಕುಟುಂಬದವರಿಗೆ ಸರ್ಕಾರದ ವತಿಯಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಈ ವೇಳೆ ಮನೆಗೆ ನೀರು ನುಗ್ಗಿದರೆ 25 ಸಾವಿರ ಪರಿಹಾರವನ್ನು ನೀಡಲಾಗುವುದು. ಮನೆಗೆ ನೀರು ನುಗ್ಗಿದ್ದರೆ ಅದನ್ನು ಸ್ವಚ್ಛಗೊಳಿಸಿ ಕೊಡುತ್ತೇವೆ ಎಂದರು.
ನಗರದಲ್ಲಿ ಮಳೆಯ ಪ್ರಮಾಣ ಹೆಚ್ಚದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತದೆ. ಇಲ್ಲಿನ ಭೌಗೋಳಿಕವಾಗಿ ಜಾಗವು ಹಾಗೆಯೇ ಇದೆ. ಒಟ್ಟಾರೆಯಾಗಿ 10ರಿಂದ 15 ಮನೆಗಳಿಗೆ ನೀರು ನುಗ್ಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕೆಲವೊಂದು ಕಡೆ ರಾಜಕಾಲುವೆ ನೀರು ಒಂದೇ ಕಡೆ ನಿಲ್ಲುತ್ತದೆ. ಇದಕ್ಕೆ ಪರಿಹಾರವೆಂದರೆ ರಾಜಕಾಲುವೆ ನೀರನ್ನು ಹೊರಗಡೆಗೆ ತಿರುಗಿಸಬೇಕು ಎಂದರು.



Join Whatsapp