Home ಟಾಪ್ ಸುದ್ದಿಗಳು ನೀತಿ ಸಂಹಿತೆ ಜಾರಿ ಹಿನ್ನೆಲೆ: ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ನೀತಿ ಸಂಹಿತೆ ಜಾರಿ ಹಿನ್ನೆಲೆ: ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬುಧವಾರ 11.30ಕ್ಕೆ ವೇಳಾಪಟ್ಟಿ ಪ್ರಕಟವಾಗಲಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಂದಿನ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ.


ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಬೇಕಿತ್ತು. ಆದರೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೂ ರದ್ದು ಮಾಡಿದ್ದಾರೆ.


ಚುನಾವಣಾ ಆಯೋಗ ಇಂದು ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಲಿದೆ. ನೀತಿ ಸಂಹಿತೆ ಸಹ ಇಂದಿನಿಂದಲೇ ಜಾರಿಯಾಗಲಿದೆ.

Join Whatsapp
Exit mobile version