ಮುಖ್ಯಮಂತ್ರಿ ಬೊಮ್ಮಾಯಿ ಮಂಗಳೂರು ಪ್ರವಾಸ ರದ್ದು

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. 

- Advertisement -

ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾ ದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ. 

ಮಧ್ಯಾಹ್ನ   ವಿಡಿಯೋ ಕಾನ್ಫರೆನ್ಸ್ ಆರಂಭವಾಗಲಿದ್ದು, ಮುಖ್ಯಮಂತ್ರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ವೀಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.

- Advertisement -

ಮೂಡುಬಿದಿರೆ ತಾಲೂಕು ಆಡಳಿತ ಸೌಧ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಬೇಕಿತ್ತು ಆದರೆ  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸುವ ಕಾರಣ ಪ್ರವಾಸ ರದ್ದು ಪಡಿಸಿದ್ದಾರೆ.

Join Whatsapp