ಶೀಘ್ರದಲ್ಲೇ ಮತಾಂತರ ನಿಷೇಧ ಕಾನೂನು ಜಾರಿ: ಬಸವರಾಜ್ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಮತಾಂತರ ನಿಷೇಧ ಕಾನೂನು ಜಾರಿ ಗೊಳಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯ ಸರ್ಕಾರ ಇತರ ರಾಜ್ಯಗಳು ಜಾರಿಗೆ ತಂದಿರುವ ಸಂಬಂಧಿತ ಕಾನೂನನ್ನು ಅಧ್ಯಯನ ಮಾಡುತ್ತಿದ್ದು, ಶೀಘ್ರದಲ್ಲೇ ಮತಾಂತರ ವಿರೋಧಿ ಕಾನೂನನ್ನು ರೂಪಿಸಲಿದೆ ಎಂದು ತಿಳಿಸಿದರು.

ಧಾರ್ಮಿಕ ಮತಾಂತರ ನಿಷೇಧಿಸುವಂತೆ ಕೋರಿ ದಾರ್ಶನಿಕರೊಂದಿಗೆ ನಡೆದ ಸಭೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.

- Advertisement -

ಹಿಂದೂ ಜನಜಾಗೃತಿ ಸಮಿತಿ ಸಂಚಾಲಕ ಮೋಹನ್ ಗೌಡ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದ ನಂತರ 50 ಕ್ಕೂ ಮಿಕ್ಕಿದ ಸ್ವಾಮೀಜಿಗಳು, ಬೊಮ್ಮಾಯಿ ಅವರನ್ನು ಭೇಟಿಯಾಗಿ ಮತಾಂತರ ನಿಷೇಧಿಸುವ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದರು.

ಬಲವಂತದ ಮತ್ತು ಆಮಿಷದ ಮತಾಂತರಕ್ಕೆ ಸಂವಿಧಾನ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದರು.

Join Whatsapp