ಇಂದು ಸಿಎಂ ಬೊಮ್ಮಾಯಿ ಮತ್ತೆ ದೆಹಲಿಗೆ : ಸಚಿವ ಸಂಪುಟದಲ್ಲಿ ಬದಲಾವಣೆ ಸಾಧ್ಯತೆ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಠಾತ್ ದೆಹಲಿಗೆ ದೌಡಾಯಿಸಿದ್ದಾರೆ. ಇದು ಈ ತಿಂಗಳ ಎರಡನೇ ಭೇಟಿಯಾಗಿದ್ದು ಸಿಎಂ ಭೇಟಿಯು ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ.

- Advertisement -

ಅವರ ಕಚೇರಿ ಬಿಡುಗಡೆ ಮಾಡಿದ ಪ್ರವಾಸ ಕಾರ‍್ಯಕ್ರಮದ ಪ್ರಕಾರ, ಮುಖ್ಯಮಂತ್ರಿಗಳು ಗುರುವಾರ ಮಧ್ಯಾಹ್ನ ನವದೆಹಲಿಗೆ ತಲುಪಲಿದ್ದಾರೆ ಮತ್ತು ಶುಕ್ರವಾರ ಸಂಜೆ ಹಿಂದಿರುಗಲಿದ್ದಾರೆ ಎಂದು ತಿಳಿದು ಬಂದಿವೆ. ಕೆಲವು ಮೂಲಗಳ ಪ್ರಕಾರ, ಸಭೆಯಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನೊಂದು ಕಡೆ ಇದು ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಇರಬಹುದು ಎಂದು ಭಾವಿಸಲಾಗಿದೆ. ಈ ವಾರದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಕರ್ನಾಟಕ ಭೇಟಿ ಮತ್ತು ಕಳೆದ ವಾರಾಂತ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪ್ರವಾಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ದೆಹಲಿ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

- Advertisement -

Join Whatsapp