ಹುಬ್ಬಳ್ಳಿ: ಮಾತೃಭಾಷೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ. ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಗೌರವಿಸಬೇಕು. ಅದನ್ನೇ ಸುದೀಪ್ ಹೇಳಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ನಟ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.
ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಸುದೀಪ್ ಹೇಳಿಕೆಗೆ ಈಗಾಗಲೇ ಹಲವು ನಟ-ನಟಿಯರು ಸೇರಿದಂತೆ ಹಲವರು ಬೆಂಬಲ ಸೂಚಿಸಿ ಟ್ವಿಟ್ ಮಾಡಿದ್ದಾರೆ.