ಫೆ. 17ರಂದು ರಾಜ್ಯ ಬಜೆಟ್‌: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಹುಬ್ಬಳ್ಳಿ: ಫೆ. 17ರಂದು ರಾಜ್ಯದ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾದು ನೋಡಿ ಎಂದು ಹೇಳಿದ್ದಾರೆ.

ರಾಜ್ಯದ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ. ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್‌ನಲ್ಲೇ ಘೋಷಿಸಲಾಗುವುದು. ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು.

Join Whatsapp