Home ಟಾಪ್ ಸುದ್ದಿಗಳು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿರುವ ಸಿಎಂ ಬೊಮ್ಮಾಯಿ: ಕಾಂಗ್ರೆಸ್ ಕಿಡಿ

ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿರುವ ಸಿಎಂ ಬೊಮ್ಮಾಯಿ: ಕಾಂಗ್ರೆಸ್ ಕಿಡಿ

ಬೆಂಗಳೂರು: ಚಿಲುಮೆ ಸಂಸ್ಥೆಯ ಅಕ್ರಮ ಬೆಳಕಿಗೆ ಬಂದಿರುವುದಕ್ಕೂ, ಮತದಾರ ಪಟ್ಟಿಯಲ್ಲಿ ಮತದಾರರ ಹೆಸರು ಕಾಣೆಯಾಗಿರುವುದಕ್ಕೂ ಸಂಬಂಧವಿದೆ. ಮತದಾರರ ಮಾಹಿತಿ ಕಳ್ಳತನ ಪ್ರಕರಣದಲ್ಲಿ ಸರ್ಕಾರ ಕಳ್ಳಾಟದ ಹೇಳಿಕೆ ನೀಡುತ್ತಾ ದಿಕ್ಕು ತಪ್ಪಿಸುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಉಡಾಫೆ ಉತ್ತರ ಕೊಟ್ಟು ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಹನಿ ಟ್ರಾಪ್ ಹನಿಗಳು ಸಿಎಂ ಕಛೇರಿಯಲ್ಲಿ ಬಿದ್ದಿದ್ದರ ಬಗ್ಗೆ ಬೊಮ್ಮಾಯಿಯವರು ಮಾತಾಡಬೇಕು. ಬಿಜೆಪಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂಬ ಆರೋಪಗಳು ಬಂದಿವೆ. ಈ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶವೇನು? ಇಂತಹ ಟ್ರಾಪ್‌ಗಳಿಂದ ಬೊಮ್ಮಾಯಿಯವರನ್ನು ಕೈಗೊಂಬೆಯ ರೀತಿ ಆಟ ಆಡಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿದೆ.

Join Whatsapp
Exit mobile version