ಬಟ್ಟಂಪಾಡಿ ಕಡಲ್ಕೊರೆತ ಸ್ಥಳಕ್ಕೆ ಭೇಟಿ‌ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಸೀ ವೇವ್ ಬ್ರೇಕಸ್೯ ತಂತ್ರಜ್ಞಾನ ಅಳವಡಿಸುವಂತೆ ಸೂಚನೆ

- Advertisement -

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಟ್ಟಪಾಡಿಯ ಕಡಲ್ಕೊರೆತ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು ಮತ್ತು ಕಡಲ್ಕೊರೆತ ತಡೆಗೆ ಬಟ್ಟಪಾಡಿಯಲ್ಲಿ ಸೀ ವೇವ್ ಬ್ರೇಕಸ್೯ ಎಂಬ ನೂತನ ತಂತ್ರಜ್ಞಾನವನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಮಂಗಳೂರು ನಗರದ ಹೊರವಲಯದಲ್ಲಿರುವ ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿ ಎದುರಾಗಿರುವ ಕಡಲ್ಕೊರೆತದ ಸ್ಥಿತಿಗತಿಗಳನ್ನು ಮಳೆಯ ನಡುವೆಯೇ ಪರಿಶೀಲಿಸಿ ವರದಿಗಾರರೊಂದಿಗೆ ಮಾತಾಡಿದ್ ಆವರು,ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ್ಕೊರೆತ ಸಮಸ್ಯೆಯಿದ್ದು, ಅದರ ತಡೆಗೆ ಎಡಿಬಿಯಿಂದ ಕೈಗೊಳ್ಳಲಾದ ಕಾಮಗಾರಿ ಸರಿಯಾಗಿಲ್ಲ ಎಂಬ ಆರೋಪವಿದೆ ಎಂದ ಅವರು, ಕಡಲ್ಕೊರೆತದಿಂದ ರಸ್ತೆ ಸಂಪರ್ಕ ಕಡಿತ ಆದಲ್ಲಿ ತಾತ್ಕಾಲಿಕವಾಗಿ ಜನರ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

- Advertisement -

ಮುಂದಿನ ತಿಂಗಳ ಭಾರಿ ಮಳೆ ಆದ್ರೆ ಇನ್ನಷ್ಟು ಹಾನಿಯಾಗಬಹುದು, ಕಡಲ ಪಕ್ಕದಲ್ಲಿ ಅಪಾಯದಲ್ಲಿರುವ ಮನೆಯವರನ್ನು ಸ್ಥಳಾಂತರ ಮಾಡಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ, ಯಾವುದೇ ರಿಸ್ಕ್ ತೆಗೆದುಕೊಳ್ಳುವುದಿಲ್ಲ ಎಂದರು
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಹಾನಿಯನ್ನು ಇಂದು ವೀಕ್ಷಿಸಲಾಯಿತು, ಸುಳ್ಯದಲ್ಲಿ ಭೂ ಕಂಪನದಿಂದ ಹಾನಿಯಾದ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ, ಭೂ ಕಂಪನದಿಂದ ಸಾಕಷ್ಟು ಪರಿಣಾಮವುಂಟಾಗಿದೆ, ಭೂ ಕಂಪನದ ಬಗ್ಗೆ ಅಧ್ಯಯನಕ್ಕೆ ಮೂರು- ನಾಲ್ಕು ಸಂಸ್ಥೆಗಳು ಸೇರಿದಂತೆ ಬೆಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತಿಳಿಸಲಾಗಿದ್ದು, ಅವರು ಅಧ್ಯಯನ ಮಾಡಿ‌ ಸಲಹೆ ಕೊಟ್ಟರೆ ಕ್ರಮ ತೆಗೆದುಕೊಳ್ಳಲಾಗುವುದು, ಈ ಸೆಸ್ಮಿಕ್ ಝೋನ್ ನಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಕೆಲವೊಂದು ವಿದ್ಯಾಮಾನಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ 40 ಕೋಟಿ ರೂ‌.ಗಳ ಅನುದಾನ ನೀಡಿದೆ, ಅದನ್ನು ಸಂಪೂರ್ಣವಾಗಿ ಬಳಕೆ ಮಾಡಿ ಸಂಪೂರ್ಣ ಅಧ್ಯಯನ ಮಾಡಿ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲಾಗುವುದು,

ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್‌. ಅಶೋಕ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp