ಮುಖ್ಯಮಂತ್ರಿ ಬೊಮ್ಮಾಯಿಗೆ ಕೊರೋನಾ: ದಿಲ್ಲಿ ಪ್ರವಾಸ ರದ್ದು

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ದಿಲ್ಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿದ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬರೆದುಕೊಂಡಿದ್ದಾರೆ.


ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಬೊಮ್ಮಾಯಿ ಅವರು ಎರಡು ದಿನಗಳ ದಿಲ್ಲಿ ಪ್ರವಾಸ ನಿಗದಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಅವರು ವರಿಷ್ಠರ ಭೇಟಿ ಮಾಡುವ ಸಾಧ್ಯತೆ ಇತ್ತು. ಆದರೆ ಆವರಿಗೆ ಕೋವಿಡ್ ಹಿನ್ನೆಲೆಯಲ್ಲಿ ಪ್ರವಾಸ ರದ್ದಾಗಿದೆ.

Join Whatsapp