Home ಟಾಪ್ ಸುದ್ದಿಗಳು ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ಮುಕ್ತ ಅವಕಾಶ: ಸಿಎಂ ಬೊಮ್ಮಾಯಿ

ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಲೋಕಾಯುಕ್ತಕ್ಕೆ ಮುಕ್ತ ಅವಕಾಶ: ಸಿಎಂ ಬೊಮ್ಮಾಯಿ

ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಸರ್ಕಾರ ಬಹಳ ಸ್ಪಷ್ಟವಾಗಿದೆ. ಯಾರೇ ಇರಲಿ, ಇಂಥ ಪ್ರಕರಣದಲ್ಲಿ ಮುಕ್ತ ಅವಕಾಶ ಲೋಕಾಯುಕ್ತಕ್ಕೆ ನೀಡಿದ್ದೇವೆ. ಕಾನೂನು ತನ್ನ ಕೆಲಸ ಮಾಡುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದೇವೆ. ಪಕ್ಷಾತೀತವಾಗಿ ಭ್ರಷ್ಟಾಚಾರ ನಿಗ್ರಹ ಮಾಡುತ್ತಿದ್ದೇವೆ ಎಂದರು.

ಕಾಂಗ್ರೆಸ್ ನವರ ಕೀಳುಮಟ್ಟದ ರಾಜಕಾರಣ

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಲೆಗಡುಕರ ಸರ್ಕಾರ ಕಿತ್ತೊಗೆಯಬೇಕೆಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅತಿ ಹೆಚ್ಚು ಕೊಲೆಗಳಾಗಿದ್ದು, ಸಿದ್ದರಾಮಯ್ಯ ಕಾಲದಲ್ಲಿ, ಧರ್ಮ, ಜಾತಿಯ ಹೆಸರಿನಲ್ಲಿ ಎಷ್ಟು ಕೊಲೆಗಳಾದವು. ಪಿಎಫ್ಐ, ಎಸ್.ಡಿ.ಪಿ ಐ ಕೊಲೆ ಪ್ರಕರಣಗಳನ್ನು ಹಿಂಪಡೆದಿದ್ದ ಸಿದ್ದರಾಮಯ್ಯ ಅವರಿಗೆ ಯಾವ ನೈತಿಕತೆ ಇದೆ. ಎಲ್ಲಾ ರಂಗದಲ್ಲಿ ಅತ್ಯಂತ ಕೀಳು ಮಟ್ಟದ ರಾಜಕಾರಣವನ್ನು ಕಾಂಗ್ರೆಸ್ ಮಾಡಿದೆ ಎಂದರು.

Join Whatsapp
Exit mobile version