ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅ.13ರ ಬುಧವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ತೆರಳುವರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಂಗಳೂರಿಗೆ ಸಂಜೆ 5.30ಕ್ಕೆ ಆಗಮಿಸುವ ಅವರು ಸಂಜೆ 6.55ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.