ನವದೆಹಲಿ: ಕೋವಿಡ್-19 ರೂಪಾಂತರಿ ‘ಓಮಿಕ್ರಾನ್’ ತಳಿಯ ಪ್ರಕರಣವು ದೇಶದಲ್ಲಿಯೇ ಮೊದಲು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.
ಓಮಿಕ್ರಾನ್ ನಮಗೆ ಒಂದು ದೊಡ್ಡ ಸವಾಲು ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಹೊಸ ನಿಯಮ ಜಾರಿ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. “ನಾವು ತಜ್ಞರಿಂದ ಈ ಬಗ್ಗೆ ಸಲಹೆಯನ್ನು ಪಡೆಯುತ್ತಿದ್ದೇವೆ. ಯಾವುದೇ ನಿರ್ಬಂಧವನ್ನು ಜಾರಿ ಮಾಡಿದಿದ್ದರೆ ಮುಂದಿನ ದಿನಗಳಲ್ಲಿ ಭಾರೀ ಬೆಲೆ ತೆರಬೇಕಾಬಹುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
“ವಿದೇಶದಿಂದ ಬರುವವರು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದಕ್ಷಿಣ ಆಫ್ರಿಕಾ ಹಾಗೂ ಯುರೋಪಿಯನ್ ದೇಶಗಳಿಂದ ಬರುವವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ. ನಾವು ಸಾಕಷ್ಟು ಮುಂಜಾಗ್ರತೆ ವಹಿಸಿದ್ದು, ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.