ದ.ಕ., ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ : ಸಿಎಂ ಯಡಿಯೂರಪ್ಪ ಘೋಷಣೆ

Prasthutha|

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ,ರಾಜ್ಯದ 16 ಜಿಲ್ಲೆಗಳಲ್ಲಿ ಶೇಕಡಾ 5 ಕ್ಕಿಂತ ಪಾಸಿಟಿವಿಟಿ ದರ ಇದ್ದು ಈ ಜಿಲ್ಲೆಗಳಲ್ಲಿ ಇನ್ನಷ್ಟು ವಿನಾಯಿತಿ ನೀಡಿದ್ದಾಗಿ ತಿಳಿಸಿದ್ದಾರೆ.   

- Advertisement -

ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಉಡುಪಿ, ಕೊಡಗು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಧಾರವಾಡ, ಬಳ್ಳಾರಿ ಮುಂತಾದೆಡೆ ಲಾಕ್ಡೌನ್ ವಿಸ್ತರಿಸಲಾಗಿದೆ. ಈ ಜಿಲ್ಲೆಗಳಿಗೆ ಹಿಂದಿನ ಲಾಕ್ಡೌನ್ ನಿಯಮಾವಳಿ ಅನ್ವಯವಾಗುತ್ತದೆ ಎಂದರು. ಅಲ್ಲದೇ, ಶೇ.10 ಕ್ಕಿಂತ ಅಧಿಕ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲೂ ನಿರ್ಬಂಧ ಮುಂದುವರೆಯಲಿರುವುದಾಗಿ ತಿಳಿಸಿದರು.

ರಾಜ್ಯ ವ್ಯಾಪ್ತಿ ಅನ್ವಯಯವಾಗುವಂತೆ ಪ್ರತಿದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ. ಹಾಗೂ ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. 

- Advertisement -

ವಿನಾಯಿತಿ ಘೋಷಿಸಲಾದ ಜಿಲ್ಲೆಗಳಲ್ಲಿ ರೆಸ್ಟೋರೆಂಟ್, ಬಸ್, ಕ್ರೀಡಾಂಗಣ ಬಳಕೆ ಹಾಗೂ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇಕಡಾ 50 ರಷ್ಟು ಸಿಬ್ಬಂದಿ, ರೆಸಾರ್ಟ್ ಹಾಗೂ ಜಿಮ್ ಗಳಲ್ಲಿ ಶೇಕಡಾ 50 ರಷ್ಟು ಮಂದಿಗೆ ಅನುಮತಿ ನೀಡಲಾಗುವುದು ಎಂದರು.

Join Whatsapp