Home ಟಾಪ್ ಸುದ್ದಿಗಳು SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ವಿದ್ಯಾರ್ಥಿಗಳಿಗೆ ಸಿಎಂ ಬಂಪರ್ ಬಹುಮಾನ: ಅವರು ಕಲಿತ ಶಾಲೆಗಳಿಗೆ 1...

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ವಿದ್ಯಾರ್ಥಿಗಳಿಗೆ ಸಿಎಂ ಬಂಪರ್ ಬಹುಮಾನ: ಅವರು ಕಲಿತ ಶಾಲೆಗಳಿಗೆ 1 ಕೋಟಿ ಮತ್ತು 50 ಲಕ್ಷ ರೂ. ಅನುದಾನ

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ಸ್ಥಾನ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 3 ಲಕ್ಷ ರೂ.ಗಳ ಬಹುಮಾನ‌ವನ್ನೂ ನೀಡಿದ್ದಾರೆ. ಅಲ್ಲದೆ, ಎರಡು ಶಾಲೆಗಳಿಗೆ ಬಂಪರ್ ಅನುದಾನ ಘೋಷಿಸಿದ್ದಾರೆ.

ಸೋಶಿಯಲ್​ ಮೀಡಿಯಾನಲ್ಲಿ ಪೋಸ್ಟ್ ಮಾಡಿದ ಸಿಎಂ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಇಂದು ಸನ್ಮಾನಿಸಿ, ಈ ಇಬ್ಬರು ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶುಭ ಕೋರಿದೆ. ಅಮೋಘ ಸಾಧನೆ ಮಾಡಿದ ಈ ವಿದ್ಯಾರ್ಥಿಗಳ ಮುಂದಿನ‌ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 3 ಲಕ್ಷ ರೂ.ಗಳ ನೆರವನ್ನು ನೀಡುತ್ತಿದ್ದೇನೆ. ಅಲ್ಲದೆ, ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

Join Whatsapp
Exit mobile version