ತಿರುಪತಿ: ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡಕ್ಕೆ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೈಎಸ್ ಆರ್ ಸಿಪಿ ನಾಯಕ, ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ಬಿ.ಕರುಣಾಕರ್ ರೆಡ್ಡಿ ಹೇಳಿದ್ದಾರೆ.
ಘಟನೆಗೆ ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಅಧೀನ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೆಡ್ಡಿ ಆಗ್ರಹಿಸಿದ್ದಾರೆ.
ಮೃತರ ಕುಟುಂಬಕ್ಕೆ ₹1 ಕೋಟಿ ಮತ್ತು ಗಾಯಗೊಂಡವರಿಗೆ ₹20 ಲಕ್ಷ ಪರಿಹಾರ ನೀಡಬೇಕು ಎಂದು ಅವರು ಹೇಳಿದ್ದಾರೆ.