Home ಟಾಪ್ ಸುದ್ದಿಗಳು ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥರ ಜೊತೆ ಸಿಎಂ, ಡಿಸಿಎಂ ಚರ್ಚೆ

ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥರ ಜೊತೆ ಸಿಎಂ, ಡಿಸಿಎಂ ಚರ್ಚೆ

ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ ತಯಾರಿಸುವ ಫಾಕ್ಸ್‌ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದರು.

ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದ ವೇಳೆ ಫಾಕ್ಸ್‌ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಮತ್ತು ಸುವ್ಯವಸ್ಥೆಯೂ ಉತ್ತಮವಾಗಿದೆ ಎಂದರು.

Join Whatsapp
Exit mobile version