ಬೆಂಗಳೂರು: ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಮತ್ತೆ ಆರು ಜಿಲ್ಲೆಗಳ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.
ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಶಾಸಕರು, ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ ಬೆಳಗಾವಿ, ಹಾವೇರಿ, ಕಲಬುರಗಿ ಜಿಲ್ಲೆಗಳ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಭೆ ನಡೆಸಲಿದ್ದಾರೆ/ ಇಂದು ಸಂಜೆ 7 ಗಂಟೆಯಿಂದ ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಸಭಾ ಸದಸ್ಯರು, ಪರಿಷತ್ ಸದಸ್ಯರ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ.