ಪಾಕ್ Vs ಆಸ್ಟ್ರೇಲಿಯಾ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆಸ್ಟ್ರೇಲಿಯಾ – ಪಾಕಿಸ್ತಾನ ನಡುವಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಿಸಿದ್ದಾರೆ.

- Advertisement -

ಶುಕ್ರವಾರ ಸಂಜೆ 7.30 ಸುಮಾರಿಗೆ ಸ್ಟೇಡಿಯಂಗೆ ತೆರಳಿ ಕೆಲ ಹೊತ್ತು ಕ್ರಿಕೆಟ್ ಪಂದ್ಯವನ್ನು ನೋಡಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸಚಿವ ಭೈರತಿ ಸುರೇಶ್, ಎಂ.ಸಿ ಸುಧಾಕರ್, ಸಿಎಂ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದ ರಾಜ್, ನಸೀರ್ ಅಹ್ಮದ್ ಸಾಥ್ ನೀಡಿದರು.

Join Whatsapp