Home ಟಾಪ್ ಸುದ್ದಿಗಳು ಮನೆ, ಬೆಳೆ ಹಾನಿ ಪರಿಹಾರ ಹಣವನ್ನು ಕೂಡಲೇ ವಿತರಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಮನೆ, ಬೆಳೆ ಹಾನಿ ಪರಿಹಾರ ಹಣವನ್ನು ಕೂಡಲೇ ವಿತರಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಮಳೆಯಿಂದ ಹಾನಿಗೀಡಾದವರಿಗೆ ಬೆಳೆ ನಷ್ಟ ಮತ್ತು ಮನೆ ಹಾನಿಗೆ ತಕ್ಷಣವೇ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿಗಳು) ಮತ್ತು ಪೊಲೀಸ್ ಅಧೀಕ್ಷಕರೊಂದಿಗೆ (ಎಸ್ಪಿಗಳು) ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಳಿಕೊಂಡರು.

ಕೂಡಲೇ ಸಮೀಕ್ಷೆ ನಡೆಸಿ, ಅಗತ್ಯವಿರುವೆಡೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು. ಬೃಹತ್ ಜಲಮೂಲಗಳನ್ನು ಹೊಂದಿರುವ ಜಿಲ್ಲೆಗಳಲ್ಲಿ  ಯಾವುದೇ ಹಾನಿ ಸಂಭವಿಸದಂತೆ  ಹೆಚ್ಚು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು.

ಭಾರೀ ಮಳೆಯಿಂದಾಗಿ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತಿರುವುದರಿಂದ ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳು ಇಂದಿನಿಂದಲೇ ಪರ್ಯಾಯ ಮಾರ್ಗಗಳಲ್ಲಿ ವಾಹನಗಳನ್ನು ಚಲಾಯಿಸಲು ಅನುಮತಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಮಳೆಯಿಂದ ಹಾನಿಗೀಡಾದ ರಸ್ತೆಗಳು ಮತ್ತು ಸೇತುವೆಗಳನ್ನು ತಕ್ಷಣವೇ ದುರಸ್ತಿಗೊಳಿಸಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು, ವಿದ್ಯುತ್ ವ್ಯತ್ಯಯವಾದಾಗಲೆಲ್ಲಾ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಬೇಕು ಮತ್ತು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವ ಜನರಿಗೆ ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದು ಬೊಮ್ಮಾಯಿ ಹೇಳಿದರು.

Join Whatsapp
Exit mobile version