ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಸಿಎಂ, ಡಿಸಿಎಂ ಚಾಲನೆ

Prasthutha|

ಬೆಂಗಳೂರು: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.

- Advertisement -

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 ರೂ. ಹಣವನ್ನು ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಹಂತ ಹಂತವಾಗಿ ಇಡೀ ರಾಜ್ಯದ ಫಲಾನುಭವಿಗಳಿಗೆ ಹಣ ಜಮೆಯಾಗಲಿದೆ.