ಬೆಂಗಳೂರು: ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ‘ಡೇರ್ ಡೆವಿಲ್ ಮುಸ್ತಾಫಾ’ ಕೃತಿ ಆಧರಿಸಿದ ಶಶಾಂಕ್ ನಿರ್ದೇಶನದ ಈ ಯಶಸ್ವಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಚಿತ್ರತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.
ತೆರಿಗೆ ವಿನಾಯಿತಿ ನೀಡಿದರೆ, ಸಿನಿಮಾ ಮತ್ತಷ್ಟು ಜನರಿಗೆ ತಲುಪಲು ಸಾಧ್ಯವಾಗಬಹುದು ಹಾಗೂ ಕಡಿಮೆ ದರದಲ್ಲಿ ಚಿತ್ರ ತೋರಿಸಲು ಉತ್ಸಾಹ ಬರಬಹುದು ಎಂದು ಈ ಸಂದರ್ಭದಲ್ಲಿ ಚಿತ್ರತಂಡ ಹೇಳಿಕೊಂಡಿದೆ.
ಇದಲ್ಲದೆ ಕೆಲವು ದಿನಗಳ ಹಿಂದಷ್ಟೆ ʼಡೇರ್ ಡೆವಿಲ್ ಮುಸ್ತಾಫಾʼ ಸಿನಿಮಾ ತಂಡ ಮತ್ತಷ್ಟು ಪ್ರೇಕ್ಷಕರನ್ನು ಸೆಳೆಯಲು ಸಿನಿಮಾದ ಟಿಕೆಟ್ ದರವನ್ನು ಕಡಿಮೆಗೊಳಿಸಿದೆ. ಜೂನ್ 6ರಿಂದ ಚಿತ್ರಮಂದಿರಗಳಲ್ಲಿ ಸಿನಿಮಾದ ಸಾಮಾನ್ಯ ಟಿಕೆಟ್ ದರ 50 ರೂಪಾಯಿ ಮತ್ತು ಬಾಲ್ಕನಿ ಟಿಕೆಟ್ ದರ 70 ರೂಪಾಯಿ ಆಗಲಿದೆ. ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರವನ್ನು 99 ರೂಪಾಯಿಗೆ ಕಡಿಮೆಗೊಳಿಸಲಾಗಿದೆ. ಎಲ್ಲರಿಗೂ ಕೈಗೆಟುಕುವ ದರದಲ್ಲಿ ಎಲ್ಲರ ನೆಚ್ಚಿನ ಸಿನಿಮಾದ ಟಿಕೆಟ್ ನೀಡಲಾಗುತ್ತಿದೆ.