ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾಪಕ್ಕೆ ಸಿಎಂ ಸಮ್ಮತಿಸಿಲ್ಲ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು  ಕಡಿತಗೊಳಿಸುವ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿರುವುದಾಗಿ ಗೃಹ ಸಚಿ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಈ ಕುರಿತು, ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿಯಾಗಿ,    ಪಂಚಾಯತ್ ಜನಪ್ರತಿನಿಧಿಗಳ ಆತಂಕವನ್ನು ಗಮನಕ್ಕೆ ತಂದರು.

ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಯವರು,  ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ  ಪಂಚಾಯತ್ ರಾಜ್ ಅಧಿನಿಯಮ ಗಳಿಗೆ ತಿದ್ದುಪಡಿಗೆ ಯಾವುದೇ ತರುವ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ ಎಂದರು.

- Advertisement -

ಗ್ರಾಮ ಪಂಚಾಯತ್  ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ, ಭವಿಷ್ಯದ  ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿದೆ ಎಂದರು.

ಗ್ರಾಮ ಪಂಚಾಯತಿ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬದ್ಧತೆ ಹೊಂದಿದೆ ಎಂದು ಸಚಿವರು ತಿಳಿಸಿದರು.

ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ವರದಿಗಳಿಗೆ ಅದನ್ನು ತಿರಸ್ಕರಿಸುವ ಮೂಲಕ, ಮುಖ್ಯಮಂತ್ರಿಗಳು ತೆರೆ ಎಳೆದಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.

Join Whatsapp