ಕೋಲಾರ : ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್ ನೀಡುವ ನಿರೀಕ್ಷೆ ಇದ್ದರೂ ಅವರು ತಪ್ಪು ಮಾಡದಿರುವಾಗ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ. ಸಿಬಿಐ, ಐಟಿ, ಇಡಿ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ ನೀಡುವ ಕುರಿತು ಮಾತನಾಡಿ, ಲೋಕಾಯುಕ್ತ ಕ್ಲೀನ್ ಚಿಟ್ ಕೊಡುತ್ತಾರೆ ಎನ್ನುವ ನಿರೀಕ್ಷೆ ಇದ್ದು,. ಇಡಿ, ಸಿಬಿಐ, ಐಟಿ ಬರಲಿ ಎದುರಿಸಲು ಸಿದ್ದವಿರುವುದಾಗಿ ತಿಳಿಸಿದರು.
ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಎನ್ನುವ ನಂಬಿಕೆ ಇರುವ ಕಾರಣ ಹೆದರಲ್ಲ, ಮುಡಾ ಪ್ರಕರಣ ಸಿಬಿಐಗೆ ನೀಡುವಂತೆ ಆಗ್ರಹಿಸಿರುವ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಎಷ್ಟು ಪ್ರಕರಣ ಸಿಬಿಐಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರು.