ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ಚರ್ಚೆಯಲ್ಲಿರುವ ವಿದ್ಯುತ್ ದರ ಪರಿಷ್ಕರಣೆ ವಿಚಾರವು ಇಂದು ಕೊನೆಗೊಳ್ಳುವ ಸಾಧ್ಯತೆ ಇದ್ದು, ಎಪ್ರಿಲ್ ತಿಂಗಳ ಮಧ್ಯದಲ್ಲಿ ಬೆಲೆ ಹೆಚ್ಚಳದ ನಿರೀಕ್ಷೆಯಿದೆ.
ಸಿ ಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೆಇಆರ್ ಸಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ವಿದ್ಯುತ್ ಪರಿಷ್ಕರಣೆಗೆ ಸಂಬಂಧಪಟ್ಟಅಂತಿಮ ಹಂತದ ಚರ್ಚೆಗಳು ನಡೆಯಲಿವೆ ಎಂದು ಮೂಲಗಳು ತಿಳಿಸಿವೆ.
ಕೃಷಿ, ಕೈಗಾರಿಕೆ, ವಾಣಿಜ್ಯ ಹಾಗೂ ಗೃಹ ಬಳಕೆ ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಕೆಪಿಟಿಸಿಎಲ್ ನ ಐದು ಕಂಪನಿಗಳು ಈಗಾಗಲೇ ಸರಕಾರಕ್ಕೆ ಶಿಫಾರಸ್ಸು ನೀಡಿದ್ದು, ಬೆಲೆ ಏರಿಕೆ ಅನಿವಾರ್ಯ ಎಂದು ಸರಕಾರ ಈಗಾಗಲೇ ಸ್ಪಷ್ಟಪಡಿಸಿದೆ.
ಕೆಇಆರ್ ಸಿ ಅಧ್ಯಕ್ಷರ ಆಯ್ಕೆಗೂ ಕಾರ್ಯಚಟುವಟಿಕೆಗಳು ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಈ ಎರಡು ವಿಚಾರಗಳು ಬಗೆಹರಿಯಲಿವೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.