ನೆರೆಪೀಡಿತ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

- Advertisement -

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಆರ್.ಟಿ ನಗರದ ಮನೆಯಿಂದ ನೇರಪೀಡಿತ ಜಿಲ್ಲೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಮತ್ತು ಪರಿಹಾರ ಕ್ರಮದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.

- Advertisement -

ಇನ್ನೂ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಹಾಗೂ ತಮ್ಮ ಜಿಲ್ಲೆಗಳಿಂದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ 17 ಜಿಲ್ಲೆಗಳ ಡಿಸಿಗಳೊಂದಿಗೆ ಸಭೆ ನಡೆಸಲಿದ್ದಾರೆ.

Join Whatsapp