ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣ: ಸತ್ಯಮೂರ್ತಿ ಬಂಧನ

Prasthutha|

- Advertisement -

ಮೈಸೂರು: ಮಂಗಳವಾರ ಮುಂಜಾನೆ ಮೈಸೂರಿನ ಟಿಕೆ ಲೇಔಟ್‌ ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಸ್ವತಿಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸತ್ಯಮೂರ್ತಿ ಬಂಧಿತ ಆರೋಪಿ.

- Advertisement -

ಸತ್ಯಮೂರ್ತಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಕಲ್ಲು ಎಸೆದು ಪರಾರಿಯಾಗಿದ್ದನು. ಪ್ರಕರಣ ಸಂಬಂಧ ಆರೋಪಿ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಸೆಕ್ಷನ್​​ 427 353 ಹಾಗೂ 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು.