ಬೆಂಗಳೂರು: ವಿಧಾನ ಪರಿಷತ್‍ನ ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ನಿರ್ಧಾರ ನೋಡಿ ನನಗೆ ಸಂತೋಷ ಆಯಿತು. ಇದರಿಂದ ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಕೆಲಸ ಮಾಡಲು ಅನುಕೂಲವಾಗುತ್ತದೆ. ಅವರಿಬ್ಬರ ವಿಚಾರಧಾರೆ ಒಂದೇ ಆಗಿರುವುದರಿಂದ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ವ್ಯಂಗ್ಯವಾಡಿದರು.ಆದಷ್ಟು ಶೀಘ್ರವೇ ಎಂಎಲ್‍ಸಿಗೆ ರಾಜೀನಾಮೆ ಕೊಡುತ್ತೇನೆ. ಈ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಚರ್ಚಿಸಿ ತಿರ್ಮಾನ ಮಾಡುತ್ತೇನೆ ಎಂದು ಹೇಳಿದರು.
ಶಿವಕುಮಾರ್‌ಗೂ ನಮಗೂ ಯಾವತ್ತು ಹೊಂದಾಣಿಕೆ ಆಗಲ್ಲ. ಅವರ ವಿಚಾರಧಾರೆಗಳು ನಮಗೆ ಆಗಲ್ಲ. ನಮಗೆ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಇತ್ತು. ಆದರೆ ಕಾಂಗ್ರೆಸ್‍ಗೂ ನನಗೂ ಮುಗಿದ ಅಧ್ಯಾಯವಾಗಿದೆ. ಸಿದ್ದರಾಮಯ್ಯ ಅವರಿಂದ ನಾನು ಕಾಂಗ್ರೆಸ್‍ಗೆ ಹೋಗಿದ್ದೆ. ಸೋನಿಯಾ ಗಾಂಧಿ ಅವರು ನನ್ನ ಭಾರ ಇಳಿಸಿದ್ದಾರೆ. ನನ್ನ ಹಿತೈಷಿಗಳ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.