Home ಟಾಪ್ ಸುದ್ದಿಗಳು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ವಜಾ: ವೈರಲ್ ಪತ್ರದ ಅಸಲಿಯತ್ತೇನು?

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿಎಂ ಇಬ್ರಾಹಿಂ ವಜಾ: ವೈರಲ್ ಪತ್ರದ ಅಸಲಿಯತ್ತೇನು?

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎನ್ನುವ ಪತ್ರಿಕಾ ಪ್ರಕಟಣೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ವಜಾಗೊಳಿಸಿ ಹೆಚ್ಡಿ ದೇವೇಗೌಡ ಅವರ ಪ್ರಕಟಣೆ ಪತ್ರವೊಂದು ವೈರಲ್ ಆಗಿದೆ.


ಆದರೆ ಈ ಪತ್ರ ನಕಲಿ ಎಂದು ತಿಳಿದು ಬಂದಿದೆ. ಈ ನಕಲಿ ಪತ್ರ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಲೆಟರ್ ಹೆಡ್ ನಲ್ಲಿದೆ. ಎಲ್ಲಾ ಮಾಧ್ಯಮದವರ ಗಮನಕ್ಕೆ, ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ಸಿ ಎಂ ಇಬ್ರಾಹಿಂ ಅವರನ್ನು ವಜಾಗೊಳಿಸಲಾಗಿದೆ ಎಂದು ಬರೆಯಲಾಗಿದೆ. ಅದರಲ್ಲಿ ದೇವೇಗೌಡರ ಸಹಿಯಂತೆ ನಕಲಿ ಮಾಡಲಾಗಿದೆ.


ಮೇಲ್ನೋಟಕ್ಕೆ ಇದೊಂದು ನಕಲಿ ಪತ್ರ ಎನ್ನುವುದು ಗೊತ್ತಾಗಿದೆ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆ ಪತ್ರ ವೈರಲ್ ಮಾಡಿದ್ದಕ್ಕೆ ಇದೀಗ ಜೆಡಿಎಸ್ ಕಾರ್ಯಕರ್ತರು ಇಬ್ರಾಹಿಂ ಅವರನ್ನು ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಲಾಗಿದೆ ಎನ್ನುವ ನಕಲಿ ಪತ್ರವನ್ನು ಸೃಷ್ಟಿಸಿ ವೈರಲ್ ಮಾಡಿದ್ದಾರೆ.

Join Whatsapp
Exit mobile version