ಪ್ರೇಮಿಗಳ ದಿನದಂದು MLC ಸ್ಥಾನಕ್ಕೆ ರಾಜೀನಾಮೆ ನೀಡುವೆ: ಸಿಎಂ ಇಬ್ರಾಹಿಂ

Prasthutha|

ಮೈಸೂರು: ಫೆಬ್ರವರಿ 14ರಂದು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂದಿನ ರಾಜಕೀಯದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿದರು.

- Advertisement -

ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲಿಮರು ಕಾಂಗ್ರೆಸ್ ನಿಂದ ಒಬ್ಬೊಬ್ಬರಾಗಿ ಹೊರ ಬರುತ್ತಿದ್ದಾರೆ. ಇದಕ್ಕೆ ಧರ್ಮ ಗುರುಗಳ ಬೆಂಬಲ ಇದೆ. ನಾನು ಫೆಬ್ರವರಿ 14ರಂದು ಪ್ರೇಮಿಗಳ ದಿನದಂದು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ನನ್ನ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುತ್ತೇನೆ.

ನನ್ನ ಮುಂದೆ ಮೂರು ಆಯ್ಕೆಗಳಿವೆ. ಒಂದು ಜೆಡಿಎಸ್, ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಆಗಿದ್ದು, ಈ ಬಗ್ಗೆ ಮುಂದೆ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

Join Whatsapp