ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿಎಂ ಇಬ್ರಾಹಿಂ ನಾಳೆ ರಾಜೀನಾಮೆ

Prasthutha|

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಸಿಎಂ ಇಬ್ರಾಹಿಂ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ. ನಾಳೆ ಬೆಳಗ್ಗೆ ೧೧ ಗಂಟೆಗೆ ರಾಜೀನಾಮೆ ಪತ್ರವನ್ನು ಸಭಾಪತಿ ಹೊರಟ್ಟಿಗೆ ಸಲ್ಲಿಸಲಿದ್ದಾರೆ.

- Advertisement -

ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಚುನಾವಣಾ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದಿರುವ ಇಬ್ರಾಹಿಂ, ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಬಗ್ಗೆ ಗೊಂದಲದಲ್ಲಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಸೇರ್ಪಡೆಗೊಳ್ಳುವ ಮುನ್ನ ಷರತ್ತುಗಳನ್ನು ಮುಂದಿಟ್ಟಿರುವ ಇಬ್ರಾಹೀಂ ಗೆ ಎಲ್ಲವನ್ನು ಬದಿಗಿರಿಸಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಮಾಜಿ ಸಿಎಂ ಹೆಚ್ ಡಿಕೆ ಸೂಚಿಸಿದ್ದಾರೆ ಎನ್ನಲಾಗಿದೆ.




Join Whatsapp