ಸಿಎಂ ಇಬ್ರಾಹಿಂ ಮಗ ಫೈಝ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Prasthutha|

ಬೆಂಗಳೂರು: ಜಿಡಿಎಸ್ ಪಕ್ಷದಿಂದ ಹೊರಬಿದ್ದಿರುವ ಹಿರಿಯ ನಾಯಕ ಸಿಎಂ ಇಬ್ರಾಹಿಂ ಅವರ ಮಗ ಸಿಎಂ ಫೈಝ್ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖ ಕಾಂಗ್ರೆಸ್ ಪಕ್ಷವನ್ನು ಸೇರಿದರು.

- Advertisement -


ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಫೈಝ್ ಅವರನ್ನು ಕಾಂಗ್ರೆಸ್ ಶಾಲು ಹೊದಿಸಿ ಮತ್ತು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ತಂದೆಯ ಹಾಗೆ ಫೈಜ್ ಸಹ ಜೆಡಿಎಸ್ ಪಕ್ಷದಲ್ಲಿದ್ದರು ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹುಮನಾಬಾದ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ತರಲು ಸಚಿವ ಜಮೀರ್ ಅಹ್ಮದ್ ಖಾನ್ ನಿರ್ಣಾಯಕ ಪಾತ್ರ ವಹಿಸಿರುವರೆಂದು ಹೇಳಲಾಗಿದೆ.



Join Whatsapp