Home ಟಾಪ್ ಸುದ್ದಿಗಳು ಸಿಎಂ ವೀಕ್ ಆಗಿಲ್ಲ, ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ: ಪರಮೇಶ್ವರ್

ಸಿಎಂ ವೀಕ್ ಆಗಿಲ್ಲ, ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ: ಪರಮೇಶ್ವರ್

ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮದವರಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡಬೇಕು ಎಂಬ ಮಾತು ಕೇಳಿ ಬರ್ತಿದೆ. ನಾವು ನ್ಯಾಯಕ್ಕಾಗಿ ಹೈಕೋರ್ಟ್‌ಗೆ ಹೋಗಿದ್ದೆವು. ಸಿಎಂ ಪಾತ್ರ ಮುಡಾ ಪ್ರಕರಣದಲ್ಲಿ ಏನೂ ಇಲ್ಲ. ಅವರಿಂದ ಯಾವುದೇ ಅಧಿಕಾರ ದುರುಪಯೋಗ ಆಗಿಲ್ಲ. ಆದರೆ ಕೋರ್ಟಿನಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ. ಮುಂದೆ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಿದೆ. ಡಬಲ್ ಬೆಂಚ್‌ನಲ್ಲಿ ಇದರ ಬಗ್ಗೆ ಪ್ರಶ್ನೆ ಮಾಡುತ್ತೇವೆ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.

ವಿಚಾರಣೆ ವೇಳೆ ಸಿಎಂ ಪಾತ್ರ ಏನು ಎಂದು ನ್ಯಾಯಾಧೀಶರೇ ಕೇಳಿದರು. ಆಗ ಇದರ ವಿಚಾರವಾಗಿ ತೀರ್ಪಿನಲ್ಲಿ ಹೇಳಿಲ್ಲ. ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ. ಸಿಎಂಗೆ 40 ರಿಂದ 45 ವರ್ಷ ರಾಜಕೀಯ ಜೀವನದಲ್ಲಿ ಯಾವುದೇ ಆಪಾದನೆ ಇರಲಿಲ್ಲ. ಇದು ರಾಜಕೀಯ ಪ್ರೇರಿತ ಅನ್ನೋ ನೋವಾಗಿದೆ. ರಾಜ್ಯಪಾಲರು ಕ್ಯಾಬಿನೆಟ್ ನಿರ್ಣಯ ಪಾಲಿಸಬೇಕು ಅನ್ನೋ ಮಾತಿದೆ. ವಿವೇಚನೆ ಬಳಸಬಹುದು ಅಂತಲೂ ಇದೆ. ಅದಕ್ಕೆ ಸಮರ್ಥನೆ ಕೂಡ ಕೊಡಬೇಕು. ತೀರ್ಪಿನಲ್ಲಿ ರಾಜ್ಯಪಾಲರ ನಿರ್ಧಾರಕ್ಕೆ ಸಮರ್ಥನೆ ಕಾಣಲಿಲ್ಲ. ಜಡ್ಜ್ಮೆಂಟ್‌ನಲ್ಲಿ ಸಮರ್ಥನೆ ಇದೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮಗೆ ಸಮಾಧಾನ ತಂದಿಲ್ಲ ಎಂದು ಹೇಳಿದರು.

Join Whatsapp
Exit mobile version