ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್. ಕೆ. ಅತೀಖ್ ನೇಮಕ

Prasthutha|

- Advertisement -

ಬೆಂಗಳೂರು: ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಇವರಿಗೆ ವಹಿಸಿ ಆದೇಶಿಸಲಾಗಿದೆ.

ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಅತೀಕ್ ಅವರಿಗೆ ವಹಿಸಿ ಆದೇಶಿಸಲಾಗಿದೆ. ಸಿದ್ದರಾಮಯ್ಯ ಅವರ ಈ ಹಿಂದಿನ‌ ಸಿಎಂ ಅವಧಿಯಲ್ಲಿ ಅತೀಕ್ ಮುಖ್ಯಮಂತ್ರಿ‌ ಪ್ರಧಾನ‌ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.‌ ಬಳಿಕ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ‌ ಕಾರ್ಯದರ್ಶಿಯಾಗಿದ್ದರು.

- Advertisement -

Join Whatsapp