Home ಟಾಪ್ ಸುದ್ದಿಗಳು ಹಿಂದುಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು‌: ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ವೈರಲ್

ಹಿಂದುಗಳ ಅಗತ್ಯ ನಮಗೆ ಬೇಡ, ಮುಸ್ಲಿಮರ ಓಟು ಸಾಕು‌: ಸಿದ್ದರಾಮಯ್ಯ ವಿರುದ್ಧ ‘ಸುಳ್ಳು ಸುದ್ದಿ’ ವೈರಲ್

ಬೆಂಗಳೂರು: ಹಿಂದುಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ಶೀರ್ಷಿಕೆ ಜೊತೆಗೆ ಪತ್ರಿಕಾ ವರದಿಯನ್ನು ಹೋಲುವ ನಕಲಿ ಸುದ್ದಿಯನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ–ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ಹೇಳಿದ್ದಾರೆ.

Join Whatsapp
Exit mobile version