ತೆಲಂಗಾಣ: ಚುನಾವಣೆಗೂ ಮುನ್ನ ಬೆಳೆ ಸಾಲ ಮನ್ನಾ ಮಾಡಿದ ಕೆಸಿಆರ್

Prasthutha|

ಹೈದರಾಬಾದ್: ತೆಲಂಗಾಣದ ರೈತರ 1 ಲಕ್ಷ ರೂ.ವರೆಗಿನ ಸಾಲ ಮನ್ನಾ ಪ್ರಕ್ರಿಯೆಯು ಸೆಪ್ಟೆಂಬರ್ 15 ರೊಳಗೆ ಪೂರ್ಣವಾಗಿ ನಡೆಯಲಿದೆ. ಈ ಕುರಿತು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಬುಧವಾರದಂದು ಪ್ರಗತಿ ಭವನದಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ನಿರ್ಣಯ ಕೈಗೊಂಡರು.

- Advertisement -

ಬೆಳೆ ಸಾಲ ಮನ್ನಾ ಯೋಜನೆಯಡಿ ಬಾಕಿ ಇರುವ ಕಂತುಗಳಿಗೆ ಸಾಲ ನೀಡುವ ಬ್ಯಾಂಕ್‌ಗಳಿಗೆ 19,000 ಕೋಟಿ ರೂಪಾಯಿ ಬಿಡುಗಡೆ ಮಾಡಲು ಅವರು ಆದೇಶಿಸಿದರು.

ರೈತರ ಕಲ್ಯಾಣ ಮತ್ತು ಕೃಷಿ ಕ್ಷೇತ್ರದ ಅಭಿವೃದ್ಧಿಯು ರಾಜ್ಯ ಸರ್ಕಾರದ ಕಾರ್ಯಸೂಚಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುತ್ತದೆ ಎಂದು ಪುನರುಚ್ಚರಿಸಿದ ಕೆಸಿಆರ್ , ಗುರುವಾರವೇ ಮನ್ನಾ ಪ್ರಕ್ರಿಯೆಯನ್ನು ಪುನರಾರಂಭಿಸಿ ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಲು ತಿಳಿಸಿದ್ದಾರೆ.

- Advertisement -

ಮತ್ತೆ ಅಧಿಕಾರ ಹಿಡಿಯಲು ರೈತರ ಮನವೊಲಿಸುವಲ್ಲಿ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಚುನಾವಣಾ ಹೊಸ್ತಿಲಲ್ಲಿ ಬಿಆರ್ ಎಸ್ ಗೆ ನೆರವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Join Whatsapp