Home ಟಾಪ್ ಸುದ್ದಿಗಳು ಗ್ಯಾರಂಟಿ ಅನುಷ್ಠಾನಕ್ಕೆ ‘ಪ್ರಗತಿ’ ಮೊಬೈಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಿದ ಸಿಎಂ

ಗ್ಯಾರಂಟಿ ಅನುಷ್ಠಾನಕ್ಕೆ ‘ಪ್ರಗತಿ’ ಮೊಬೈಲ್ ಅಪ್ಲಿಕೇಶನ್ ಬಿಡುಗಡೆಗೊಳಿಸಿದ ಸಿಎಂ

  • ಬೆಂಗಳೂರು : ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು, ‘ಪ್ರಗತಿ ಮೊಬೈಲ್ ಅಪ್ಲಿಕೇಶನ್’ ಅನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಇದೇ ಸಮಯ ಸ್ಪಷ್ಟ ಪಡಿಸಿದ್ದಾರೆ.

ಪ್ರಗತಿ ಮೊಬೈಲ್ ಅಪ್ಲಿಕೇಶನ್ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಸಹಾಯ‌ ಮಾಡಲಿದೆ. ಅಧಿಕಾರಿಗಳು ವೇಳಾಪಟ್ಟಿಯ ಪ್ರಕಾರ ಸಂಸ್ಥೆಗಳಿಗೆ ಭೇಟಿ ನೀಡುವುದರಿಂದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳನ್ನು ಪರಿಹರಿಸಲು ಸಹಾಯ ಮಾಡಲಿದೆ.

ಬಡವರ ಪರವಾದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ ಎಂದು ಸಿಎಂ ಇದೇ ಸಮಯ ಹೇಳಿದ್ದಾರೆ.

Join Whatsapp
Exit mobile version